
ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯಲ್ಲಿ ನಡೆದಿದ್ದು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ(Arun Kugwe) ಮೋಸ ಮಾಡಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಂಧಿಸಿದ್ದಾರೆ. ಸಾಗರದ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆದರೆ, ಕಾರಣಾಂತರದಿಂದ ಕೇಸ್ ದಾಖಲಾಗಿರಲಿಲ್ಲ. ಈಗ ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಹೀಗಾಗಿ ಮಹಿಳಾ ಠಾಣೆ ಪೊಲೀಸ್ ಸಿಪಿಐ ಭರತ್ ಕುಮಾರ್ ನೇತೃತ್ವದಲ್ಲಿ ಸಾಗರದ ನಿವಾಸದಲ್ಲಿ ಅರುಣ್ ನನ್ನು ಬಂಧಿಸಲಾಗಿದೆ.

ಮದುವೆ ಆಗುವ ಆಸೆ ತೋರಿಸಿದ ಅರುಣ್ ಕುಗ್ವೆ, ನಾಲ್ಕು ವರ್ಷಗಳಿಂದ ಸಂಬಂಧ ಬೆಳೆಸಿ ತನ್ನೊಂದಿಗೆ ಸಂಪರ್ಕ ಬೆಳೆಸಿದ್ದಾನೆ. ನಂತರದ ವಿವಿಧ ಆಮಿಷ ತೋರಿಸಿ ಮದುವೆಯಾಗುತ್ತೇನೆ ಎಂದು ಹೇಳುತ್ತಾ, ಬಲಾತ್ಕಾರ ಮಾಡಿದ್ದಾನೆ. ಜೋಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ಆಮಿಷ ತೋರಿಸಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.
ಬೇರೆ ಹುಡುಗಿಯರೊಂದಿಗೆ ಇದೇ ರೀತಿ ವರ್ತಿಸಿದ್ದು ಕಂಡು ಬಂದಾಗ ಆ ಬಗ್ಗೆ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುತ್ತಾನೆ. ಅದನ್ನ ಪ್ರಶ್ನಿಸಿದ್ದಕ್ಕೆ ಅವನ ಸೋದರ ಗಣೇಶ್ ಎಂಬುವವನು ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
