ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆಯೊಂದು ನಡೆದಿದೆ.
ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕೆ.ಚೆನ್ನಸಂದ್ರ ಲೇಕ್ ನಲ್ಲಿ ರಕ್ತಸಿಕ್ತವಾಗಿ ಬಿದ್ದಿರುವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಮೃತದೇಹ ಬಾಂಗ್ಲಾ ಮೂಲದ ನಜ್ಮ ಎಂಬ ಮಹಿಳೆಯದ್ದು ಎನ್ನಲಾಗಿದೆ.
ಈ ಕುರಿತು ರಾಮಮೂರ್ತಿ ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ನಜ್ಮಾ ಅತ್ಯಾಚಾರ ಆಗಿರುವ ಸ್ಥಳದಿಂದ ಅನತಿ ದೂರದಲ್ಲಿರುವ ಅಪಾರ್ಟ್‌ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಕೊತ್ತನೂರಿನಲ್ಲಿರುವ ಮನೆ ಕಡೆ ಹೊರಟುವರು ನಾಪತ್ತೆಯಾಗಿದ್ದರು. ಹೀಗಾಗಿ ಪತಿ ಸುಮನ್ ಅನುಮಾನಗೊಂಡು ರಾಮಮೂರ್ತಿ ನಗರ ಠಾಣೆಗೆ ಬಂದು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಆದರೆ, ಕಲ್ಕರೆ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಮಾಹಿತಿ ಸಿಕ್ಕಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಮಹಿಳೆಯನ್ನು ಅತ್ಯಾಚಾರ ಮಾಡಿ,ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.