ಪ್ಯಾನ್ ಇಂಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿರುವ ರಶ್ಮಿಕಾ ಮಂದಣ್ಣ ಈಗ ಮದುವೆಯ ಬಗ್ಗೆ ಮಾತನಾಡಿದ್ದಾರೆ.
ಈ ವಿಷಯ ಹೇಳುವಾಗ ರಶ್ಮಿಕಾ ನಾಚಿ ನೀರಾಗಿದ್ದಾರೆ. ಇತ್ತೀಚೆಗೆ ನಟಿ ರಶ್ಮಿಕಾ ಹಾಗೂ ವಿಜಯ ದೇವರಕೊಂಡ ಬಗ್ಗೆ ಗಾಸಿಪ್ ಜೋರಾಗಿತ್ತು. ಹಲವು ಬಾರಿ ಇವರಿಬ್ಬರು ಜೊತೆಗಿರುವ ಫೋಟೋಗಳು ವೈರಲ್ ಆಗಿವೆ. ಇದನ್ನು ನೋಡಿ ಅಭಿಮಾನಿಗಳು ಶೀಘ್ರವೇ ವಿವಾಹ ಆಗುತ್ತಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಈ ವೇಳೆ ನಾಚಿ ನೀರಾಗಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಂದರ್ಭದಲ್ಲಿ ವೈಯಕ್ತಿಕ ವಿಚಾರದ ಬಗ್ಗೆ ಚರ್ಚೆ ನಡೆದಿತ್ತು. ಇದಕ್ಕೆ ರಶ್ಮಿಕಾ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ವೇದಿಕೆಯಲ್ಲಿ ನೀವು ಸಿನಿಮಾ ಇಂಡಸ್ಟ್ರಿಯನ್ನು ಮದುವೆ ಆಗ್ತೀರಾ ಅಥವಾ ಹೊರಗಿನವರನ್ನು ಮದುವೆ ಆಗ್ತೀರಾ? ಎಂದು ಪ್ರಶ್ನಿಸಿದರು. ಈ ವೇಳೆ ಎಲ್ಲರಿಗೂ ಆ ಬಗ್ಗೆ ಗೊತ್ತು’ ಎಂದು ರಶ್ಮಿಕಾ ಹೇಳಿದ್ದಾರೆ. ಆಗ ಸುಳಿವು ನೀಡಿ ಎಂದು ಕೇಳಲಾಯಿತು. ರಶ್ಮಿಕಾ ಅವರು, ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದ್ದಾರೆ.