ಸಲ್ಮಾನ್ ಖಾನ್ (Salman Khan) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ‘ಸಿಕಂದರ್’ (Sikandar) ಚಿತ್ರ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಈ ಮಧ್ಯೆ ಹೋಳಿ ಹಬ್ಬದ ಕುರಿತಾದ ಹಾಡಿಗೆ ಇಬ್ಬರೂ ಹೆಜ್ಜೆ ಹಾಕಿದ್ದಾರೆ.
‘ಬಂಬಂ ಬೋಲೆ’ ಎಂಬ ಹೋಳಿ ಹಬ್ಬದ ಕಲರ್‌ಫುಲ್ ಸಾಂಗ್ ಬಿಡುಗಡೆಯಾಗಿದ್ದು, ಸಲ್ಮಾನ್ ಮತ್ತು ರಶ್ಮಿಕಾ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ಸಾಂಗ್‌ನಲ್ಲಿ ಕಾಜಲ್ ಅಗರ್‌ವಾಲ್ (Kajal Aggarwal) ಲುಕ್ ಕೂಡ ಅನಾವರಣಗೊಂಡಿದೆ.
ಆದರೆ, ಈಗ ಅಭಿಮಾನಿಗಳು ಕಾಜಲ್ ಪಾತ್ರದ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಕಾಜಲ್ ಕೂಡ ನಟಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಸಲ್ಮಾನ್‌ಗೆ ರಶ್ಮಿಕಾ ಒಬ್ಬಳೇ ನಾಯಕಿನಾ? ಅಥವಾ ಕಾಜಲ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರಾ? ಎಂದೆಲ್ಲಾ ಫ್ಯಾನ್ಸ್ ಪ್ರಶ್ನಿಸುತ್ತಿದ್ದಾರೆ.
ಈ ಚಿತ್ರವನ್ನು ಎ.ಆರ್ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ. ಸಾಜಿದ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಮೊದಲ ಬಾರಿಗೆ ಸಲ್ಮಾನ್ ಜೊತೆ ರಶ್ಮಿಕಾ ಬಣ್ಣ ಹಚ್ಚಿದ್ದಾರೆ.