ಬೆಂಗಳೂರು : RSS ಈಗ ನೂರನೇ ವರ್ಷದ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ಸಂಘ ಯಾಕೆ ನೋಂದಣಿಯಾಗಿಲ್ಲ ಎಂಬ ಪ್ರಶ್ನೆಯನ್ನು ಹಲವು ಮಂದಿ ಎತ್ತುತ್ತಿದ್ದಾರೆ. ಇವರಿಗೇನು ಪ್ರತ್ಯೇಕ ಕಾನೂನು ದೇಶದಲ್ಲಿ ಇದೆಯಾ? ಎಂಬ ಪ್ರಶ್ನೆಗಳು ಕಾಂಗ್ರೆಸ್ ಪಾಳಯದಿಂದ ಕೇಳಿ ಬರುತ್ತಲೇ ಇದೆ. ಸಾಮಾಜಿಕ ಜಾಲತಾಣದಲ್ಲಿಯೂ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಇವುಗಳಿಗೆಲ್ಲ ಇದೀಗ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಉತ್ತರ ಕೊಟ್ಟಿದ್ದಾರೆ.
ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆ ಹೊಸಕೆರೆಹಳ್ಳಿಯ PES ಕಾಲೇಜು ಸಭಾಂಗಣದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ನಿನ್ನೆ ಉಪನ್ಯಾಸ ನೀಡಿದ್ದರು. ಈ ವೇಳೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳ ರಾಜ್ಯದಿಂದ ಆಗಮಿಸಿರುವ ವಿವಿಧ ಕ್ಷೇತ್ರಗಳ ಆಹ್ವಾನಿತರ ಪ್ರಶ್ನೆಗೆ ಅವರು ಉತ್ತರ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
ಆರ್‌ಎಸ್‌ಎಸ್ ಇನ್ನೂ ಯಾಕೆ ನೋಂದಣಿಯಾಗಿಲ್ಲ?
ಈ ಪ್ರಶ್ನೆ ಬರುವುದು ಹೊಸದೆನಲ್ಲ. ಸಾಕಷ್ಟು ಬಾರಿ ಈ ಪ್ರಶ್ನೆಗೆ ನಾವು ಉತ್ತರ ನೀಡಿದ್ದೇವೆ. RSS ಸ್ಥಾಪನೆ ಆಗಿದ್ದು 1925ರಲ್ಲಿ. ಆಗ ಭಾರತದಲ್ಲಿದ್ದ ಬ್ರಿಟಿಷರ ಬಳಿ ನಾವು ಸಂಘವನ್ನು ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ಡಾಯ ಮಾಡಿಲ್ಲ. ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕ ಸಂಘವಾಗಿದ್ದು, ಹೀಗಾಗಿಯೇ ನೋಂದಣಿ ಮಾಡಿಸಿಲ್ಲ. ಹಿಂದೂ ಧರ್ಮ ಕೂಡಾ ನೋಂದಣಿ ಆಗಿಲ್ಲ. RSS ನಿಷೇಧ ಮಾಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಕೋರ್ಟ್ ಇದನ್ನು ತಿರಸ್ಕರಿಸಿದೆ. ನಮ್ಮದು ಸಂವಿಧಾನಾತ್ಮಕ ಸಂಘವಾಗಿದ್ದು, ಆರ್‌ಎಸ್‌ಎಸ್ ಆದಾಯ ತೆರಿಗೆ ಸಹ ಕಟ್ಟುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : 7 ಸೀಟಿನ ಇವಿ ಕಾರನ್ನು ರಸ್ತೆಗೆ ಇಳಿಸಲಿದೆ ಮಹೀಂದ್ರಾ ; ಏನದರ ವಿಶೇಷತೆ?



















