ಬೆಂಗಳೂರು: ದೇಶದ ಕೇಂದ್ರೀಯ ಬ್ಯಾಂಕ್ ಆಗಿರುವ ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಖಾಲಿ ಇರುವ 93 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RBI Lateral Recruitment 2025-26) ಹೊರಡಿಸಲಾಗಿದೆ. 93 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್
ಹುದ್ದೆ ಹೆಸರು: ಸ್ಪೆಷಲಿಸ್ಟ್ ಆಫೀಸರ್
ಒಟ್ಟು ಹುದ್ದೆ: 93
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 6
ಗ್ರೇಡ್ ಸಿ. ಗ್ರೇಡ್ ಡಿ ಹಾಗೂ ಗ್ರೇಡ್ ಇ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಯಾ ಗ್ರೇಡ್ ಅನ್ವಯ ನೇಮಕಾತಿಗೊಂಡವರಿಗೆ ಮಾಸಿಕ 3 ಲಕ್ಷ ರೂಪಾಯಿಯಿಂದ 6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಬಿ.ಇ, ಬಿ.ಎಸ್ಸಿ, ಬಿ.ಟೆಕ್, ಬಿಬಿಎ, ಎಂಎಸ್ಸಿ, ಎಂಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಮೊದಲು ಅರ್ಜಿಗಳ ಪರಿಶೀಲನೆ, ನಂತರ ದಾಖಲೆ ಪರಿಶೀಲನೆ ಹಾಗೂ ಕೊನೆಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್, ಒಬಿಸಿಯವರಿಗೆ 600 ರೂಪಾಯಿ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ www.rbi.org.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ: 2026ರ ಮಾರ್ಚ್ ನಿಂದ ಯುಪಿಐ, ಎಟಿಎಂ ಮೂಲಕವೇ ಪಿಎಫ್ ಹಣ ವಿತ್ ಡ್ರಾ : ಇಲ್ಲಿದೆ ಅಪ್ಡೇಟ್



















