ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಸೂತಕ ಆವರಿಸಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಕಾಲ್ತುಳಿತ (Stampede) ಸಂಭವಿಸಿ 11 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ಹೊರಡಿಸಿತ್ತು. ಈಗ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.
ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದಾರೆ. ವಕೀಲ ಹೇಮಂತ್ ರಾಜ್, ಜಿ.ಆರ್.ಮೋಹನ್ ಕೂಡ ಮಾಹಿತಿ ನೀಡಲಿದ್ದಾರೆ. ಹೈಕೋರ್ಟ್ ಕಟ್ಟಡದ ಮೇಲೆ ಕೂಡ ಜನರು ನಿಂತಿದ್ದು, ಭದ್ರತಾ ವೈಫಲ್ಯವಾಗಿದೆ ಎಂದು ವಕೀಲರು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.