ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಚುರುಕುಗೊಂಡಿದೆ.
ಇಂದು ಕೂಡ ತನಿಖೆ ಮುಂದುವರೆಯಲಿದ್ದು, ಜಿಲ್ಲಾಧಿಕಾರಿ ಜಗದೀಶ್, ಗಾಯಾಳುಗಳ ಹೇಳಿಕೆಯನ್ನು ದಾಖಲೆ ಮಾಡಿಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ನ್ಯಾಯಾಲಯ ಸಂಭಾಂಗಣದಲ್ಲಿ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ.
ಯಾವ ಸಮಯದಲ್ಲಿ ಘಟನೆ ಸಂಭವಿಸಿತು? ಯಾವ ಕಾರಣದಿಂದ ಕಾಲ್ತುಳಿತ ಉಂಟಾಯ್ತು? ಘಟನೆ ಸಂಭವಿಸಿದ ದಿನ ಗಾಯಾಳುಗಳು ಎದುರಿಸಿದ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಇಂದು ಪ್ರತಿಯೊಬ್ಬ ಗಾಯಾಳು ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ.



















