ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ರಾಸಾಯನಿಕ ಮತ್ತು ರಸಗೊಬ್ಬರ ಲಿಮಿಟೆಡ್ (RCFL Recruitment 2025 ) ಸಂಸ್ಥೆಯಲ್ಲಿ ಖಾಲಿ ಇರುವ 74 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಇರುವ ಘಟಕಗಳಲ್ಲಿ ಕಾರ್ಯನಿರ್ವಹಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆಪರೇಟರ್ ಟ್ರೈನಿ, ಟೆಕ್ನಿಶಿಯನ್, ಫೈರ್ ಮನ್, ನರ್ಸ್ ಸೇರಿ ಒಟ್ಟು 74 ಹದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 2025ರ ಜುಲೈ 25ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಯಾವ ಹುದ್ದೆ ಎಷ್ಟು ಖಾಲಿ?
ಆಪರೇಟರ್ (ಕೆಮಿಕಲ್) ಟ್ರೈನಿ : 54
ಬಾಯ್ಲರ್ ಆಪರೇಟರ್ ಗ್ರೇಡ್ III : 3
ಜೂನಿಯರ್ ಫೈರ್ ಮನ್ ಗ್ರೇಡ್ II : 2
ನರ್ಸ್ ಗ್ರೇಡ್ II : 1
ಟೆಕ್ನಿಶಿಯನ್ (ಇನ್ ಸ್ಟ್ರುಮೆಂಟೇಶನ್) ಟ್ರೈನಿ : 4
ಟೆಕ್ನಿಶಿಯನ್ (ಎಲೆಕ್ಟ್ರಿಕಲ್) ಟ್ರೈನಿ : 2
ಟೆಕ್ನಿಶಿಯನ್ (ಮೆಕ್ಯಾನಿಕಲ್) ಟ್ರೈನಿ : 8
ಎಸ್ಸೆಸ್ಸೆಲ್ಸಿ, ಪಿಯುಸಿ, ಬಿ.ಎಸ್ಸಿ, ಡಿಪ್ಲೋಮಾ ಅಥವಾ ತತ್ಸಮಾನ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿಯವರಿಗೆ 35-36 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ಸಮುದಾಯದವರಿಗೆ 33 ವರ್ಷಗಳ ವಯೋಮಿತಿ ಇದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ 60 ಸಾವಿರ ರೂಪಾಯಿ ಮಾಸಿಕ ವೇತನ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಸಮುದಾಯದವರು, ಮಹಿಳೆಯರು ಹಾಗೂ ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದವರಿಗೆ 750 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆನ್ ಲೈನ್ ಪರೀಕ್ಷೆ ಹಾಗೂ ಕೌಶಲಗಳ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು rcfltd.com ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 9ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.



















