ಬೆಂಗಳೂರು : ಕೇಂದ್ರ ಸರ್ಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಕೆಮಿಕಲ್ ಆ್ಯಂಡ್ ಫರ್ಟಿಲೈಸರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (RCFL Recruitment 2026) ಖಾಲಿ ಇರುವ 32 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಸಿಸ್ಟಂಟ್ ಎಂಜಿನಿಯರ್, ಸೀನಿಯರ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಕೆಮಿಕಲ್ ಆ್ಯಂಡ್ ಫರ್ಟಿಲೈಸರ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 32
ಹುದ್ದೆಗಳ ಹೆಸರು: ಅಸಿಸ್ಟಂಟ್ ಎಂಜಿನಿಯರ್, ಸೀನಿಯರ್ ಮ್ಯಾನೇಜರ್ ಇತ್ಯಾದಿ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 13
ಆಫೀಸರ್, ಸೀನಿಯರ್ ಮ್ಯಾನೇಜರ್, ಅಸಿಸ್ಟಂಟ್ ಎಂಜಿನಿಯರ್, ಡೆಪ್ಯೂಟಿ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಡಿಪ್ಲೋಮಾ, ಎಲ್ಎಲ್ ಬಿ, ಎಂಬಿಎ, ಎಂಬಿಬಿಎಸ್, ಬಿ.ಇ, ಬಿ.ಟೆಕ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂ.ನಿಂದ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 52 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ವಿಶೇಷ ಚೇತನರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ rcfltd.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ



















