ಬೆಂಗಳೂರು: ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ (RDCCB Recruitment 2025) ಖಾಲಿ ಇರುವ 70 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಬ್ರ್ಯಾಂಚ್ ಮ್ಯಾನೇಜರ್, ಹೆಲ್ಪರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್
ಹುದ್ದೆಗಳ ಹೆಸರು: ಬ್ರ್ಯಾಂಚ್ ಮ್ಯಾನೇಜರ್
ಒಟ್ಟು ಹುದ್ದೆಗಳು: 70
ಉದ್ಯೋಗ ಸ್ಥಳ: ರಾಯಚೂರು, ಕೊಪ್ಪಳ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 22
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಎಸ್ಸೆಸ್ಸೆಲ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಬ್ಯಾಂಕ್ ಮ್ಯಾನೇಜರ್ ಗ್ರೇಡ್-1 ವಿಭಾಗದಲ್ಲಿ 15, ಅಸಿಸ್ಟಂಟ್ ವಿಭಾಗದಲ್ಲಿ 45 ಹಾಗೂ ಹೆಲ್ಪರ್ ವಿಭಾಗದಲ್ಲಿ 10 ಹುದ್ದೆಗಳು ಖಾಲಿ ಇವೆ.
ಕನಿಷ್ಠ 18ರಿಂದ ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ, ಜನರಲ್ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 37,500 ರೂ.ನಿಂದ 1,12,900 ರೂ.ವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ಸೈಟ್ https://tascguru.com/raichur-dcc-bank/ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ: ಭಾರತದ 53ನೇ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ



















