ಬೆಂಗಳೂರು: ಕರ್ನಾಟಕದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಒಂದು ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ರಾಮನಗರ ಜಿಲ್ಲೆಯಲ್ಲಿ ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ. ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಮೇ 31 ಕೊನೆಯ ದಿನವಾಗಿದೆ. ಹಾಗಾಗಿ, ಅಭ್ಯರ್ಥಿಗಳು ನಾಳೆಯೊಳಗೆ ಸಲ್ಲಿಸಬೇಕಾಗಿದೆ.
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ rdpr.karnataka.gov.in ಗೆ ಭೇಟಿ ನೀಡಬಹುದು.
ನೇಮಕಾತಿ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಜಾಯತ್ ರಾಜ್ ಇಲಾಖೆ
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ರಾಮನಗರ- ಕರ್ನಾಟಕ
ಹುದ್ದೆಗಳ ಹೆಸರು: ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್
ಸಂಬಳ: 44 ಸಾವಿರ ರೂ.
ಅರ್ಜಿ ಸಲ್ಲಿಸುವ ವಿಳಾಸ
Office of Executive Engineer, Rural Drinking Water & Sanitation Department, 3rd Floor, Panchayat Bhavan, Ramanagara – 562159, Karnataka