ಮೈಸೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯ ರಂಗನಾಥಪುರದಲ್ಲಿ ಇಂದು ನಡೆದ ದಂಡಿನ ಮಾರಮ್ಮ ದೇವಾಲಯದ ಮರು ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.
















