ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ವಂಚಿಸಿದ್ದ ನಾಲ್ವರು ಸೈಬರ್ ಕಳ್ಳರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರಿನ ಎಂ. ಶಶಿಕುಮಾರ್ (25), ಎಂ. ಸಚಿನ್ (26), ಎಸ್.ಕೆ. ಕಿರಣ್ (25) ಮತ್ತು ಸಿ. ಚರಣ್ ರಾಜ್ (26) ಬಂಧಿತ ಆರೋಪಿಗಳು. ಬಂಧಿತರಿಂದ 25 ಕೋಟಿ ರೂ. ಮೌಲ್ಯದ ನಗದು, ಮೊಬೈಲ್, ಡಿಜಿಟಲ್ ಸಾಕ್ಷ್ಯ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಫೇಸ್ಬುಕ್, ಇನ್ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದ ಮೂಲಕ ಅಮಾಯಕರನ್ನು ಸೆಳೆದು ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಸಿಗಲಿದೆ ಎಂದು ಜಾಹೀರಾತು ನೀಡುತ್ತಿದ್ದರು.
ಲಿಂಕ್ ಮೇಲೆ ಕ್ಲಿಕ್ ಮಾಡುವರ ಮೊಬೈಲ್ ನಂಬರ್ ನ್ನು ಟೆಲಿಗ್ರಾಂ ಅಥವಾ ವಾಟ್ಸ್ಆಪ್ ಗ್ರೂಪ್ ಸದಸ್ಯರಾಗಿ ಮಾಡಿಕೊಳ್ಳುತ್ತಿದ್ದರು. ನಂತರ ಆಪ್ ಡೌನ್ಲೋಡ್ ಮಾಡಿಸಿ ಅದರಲ್ಲಿ ಹೂಡಿಕೆ ಮಾಡುವಂತೆ ಉತ್ತೇಜನ ನೀಡುತ್ತಿದ್ದರು. ಹೂಡಿಕೆ ಮಾಡಿದ ಹಣ ದೋಚುತ್ತಿದ್ದ ಸೈಬರ್ ಕಳ್ಳರು, ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡು ವಂಚನೆ ಮಾಡುತ್ತಿದ್ದರು ಎಂಬುವುದು ತನಿಖೆಯಿಂದ ತಿಳಿದು ಬಂದಿದೆ.