ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಿಸಲಾಗಿದೆ.
ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸುಪಾರಿ ಕಿಲ್ಲರ್ಸ್ಗಳಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ದುಷ್ಕರ್ಮಿಗಳಿಂದ ಈ ಭೀಕರ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಗಲಾಟೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

















