ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ.
ರಜನಿಕಾಂತ್ ನಟಿಸುತ್ತಿರುವ ಕೂಲಿ ಚಿತ್ರದಲ್ಲಿ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಕುರಿತು ನಟ ಉಪೇಂದ್ರ ಸ್ವತಃ ಪೋಸ್ಟ್ ಹಂಚಿಕೊಂಡು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ದಿಗ್ಗಜರೇ ನಟಿಸುತ್ತಿರುವ ಕೂಲಿ ಸಿನಿಮಾ ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ತೆರೆಗೆ ಅಪ್ಪಳಿಸಲಿದೆ. ಈ ಚಿತ್ರವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ತಲೈವಾ ಅವರ 171ನೇ ಸಿನಿಮಾ ಆಗಿದೆ. ಈ ಚಿತ್ರದ ಮೂಲಕ ರಜನಿಕಾಂತ್ ಉತ್ತಮ ಕೂಲಿ ಕೂಡ ಪಡೆದಿದ್ದಾರೆ. ಅಭಿಮಾನಿಗಳು ಕೂಡ ಉತ್ತಮ ಕೂಲಿ ನೀಡಲಿ ಎಂದು ಮನವಿ ಮಾಡುತ್ತಿದ್ದಾರೆ.
ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ. ರಜನಿಕಾಂತ್ ಮತ್ತು ಲೋಕೇಶ್ ಕನಕರಾಜ್ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್ ಸ್ಟಾರ್ ಉಪೇಂದ್ರ ನಟಿಸಲಿದ್ದಾರೆ. ಉಪೇಂದ್ರ ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.
ತಲೈವಾ ರಜಿನಿಕಾಂತ್ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್ ಸ್ಟಾರ್ ರಜಿನಿ ಸರ್ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್ ಬ್ಲೆಸ್ಡ್ ಅಂತ ಲೋಕೇಶ್ ಕನಕರಾಜ್ ಅವರಿಗೆ ಧನ್ಯವಾದ ಎಂದು ಹೇಳಿದ್ದಾರೆ.