ನವ ದೆಹಲಿ : ಪ್ರಧಾನಿ ನರೇಂದ್ರ ಮೋದಿ 2047ರ ವೇಳೆಗೆ ಭಾರತದ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂಬ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂದು ಕೇಂದ್ರ ಆರೋಗ್ಯ ರಾಜ್ಯ ಖಾತೆ ಸಚಿವೆ ಅನುಪ್ರಿಯಾ ಪಟೇಲ್ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ನಾವು ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರ ಎಂದು ಗುರುತಿಸುವುದು ಅಪ್ರಸ್ತುತ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.
ಹಾರ್ಡಿಂಗ್ ವೈದ್ಯಕೀಯ ಕಾಲೇಜಿನ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರೋಗ್ಯವಂತ ರಾಷ್ಟ್ರ ಮಾತ್ರ ನಿಜವಾಗಿಯೂ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬಹುದು ಎಂದು ಹೇಳಿದ್ದಾರೆ.
ʼಆರೋಗ್ಯವಂತ ಭಾರತʼ ಮತ್ತು ʼಎಲ್ಲರಿಗೂ ಆರೋಗ್ಯʼ ಇವು ಘೋಷಣೆಗಳಲ್ಲದೇ ಸರ್ಕಾರದ ಬದ್ಧತೆಯಾಗಿದೆ ಎಂದರು. ಆರೋಗ್ಯ ಕ್ಷೇತ್ರದಲ್ಲಿನ ಭಾರತದ ಹೂಡಿಕೆ ಮುಂದುವರೆದ ದೇಶಗಳಿಗಿಂತಲೂ ಹೆಚ್ಚು ಎಂದಿದ್ದಾರೆ.