ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಇಂದು ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಕಾರ್ಯ ಆರಂಭವಾಗಲಿದೆ. ಎಣಿಕಾ ಕೇಂದ್ರದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಆದೇಶಿಸಿದ್ದಾರೆ.
ಹೈಕೋರ್ಟ್ ಆದೇಶದ ಮೇರೆಗೆ ಮರು ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣಾಧಿಕಾರಿ ಗೌರವ್ ಶೆಟ್ಟಿ ನೇತೃತ್ವದಲ್ಲಿ ಒಂದೇ ಟೇಬಲ್‌ನಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಯಲಿದ್ದು, ಆರು ಜನ ಸಹಾಯಕ ಚುನಾವಣಾಧಿಕಾರಿಗಳು ಸಾಥ್ ನೀಡಲಿದ್ದಾರೆ. ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.
ಸ್ಡ್ರಾಂಗ್ ರೂಂಗೆ ಶಾಸಕ ರಾಜೇಗೌಡ, ಮಾಜಿ ಶಾಸಕ ಜೀವರಾಜ್, ಸುಧಾಕರ್ ಶೆಟ್ಟಿ ಆಗಮಿಸಿದ್ದಾರೆ. ಜಿಲ್ಲಾಧಿಕಾರಿ ನಾಗರಾಜ್, ಕೊಪ್ಪ-ಶೃಂಗೇರಿ-ಚಿಕ್ಕಮಗಳೂರು ತಹಶೀಲ್ದಾರ್ ಕೂಡ ಬಂದಿದ್ದಾರೆ. ಮತ ಎಣಿಕೆಯ ವೀಕ್ಷಕರಾಗಿ ಕಿರಣ್ ಹೆಚ್ ಕುಲಕರ್ಣಿ ಆಗಮಿಸಿದ್ದಾರೆ.
ಅಂಚೆ ಮತಪತ್ರದ ವಿವರ
- ಒಟ್ಟು ಅಂಚೆ ಮತ ಪತ್ರ:1822
- ಮಾನ್ಯಗೊಂಡ ಅಂಚೆ ಮತ ಪತ್ರ:1540
- ತಿರಸ್ಕೃತ ಅಂಚೆ ಮತಪತ್ರ: 279
- ನೋಟಾ ಅಂಚೆ ಮತಪತ್ರ:03
ಇದನ್ನೂ ಓದಿ : ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್.. ವಿಡಿಯೋ ನೋಡಿ!


















