ಬೆಂಗಳೂರು: ಕಲಬುರಗಿಯಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (DLSA Kalaburagi Recruitment 2025) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎರಡು ಆಫೀಸ್ ಅಸಿಸ್ಟಂಟ್ ಅಥವಾ ಕ್ಲರ್ಕ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 25
ಉದ್ಯೋಗ ಸ್ಥಳ: ಕಲಬುರಗಿ
ಡೆಪ್ಯುಟಿ ಲೀಗಲ್ ಏಡ್ ಡಿಫೆನ್ಸ್ ಕೌನ್ಸೆಲ್ ಹಾಗೂ ಆಫೀಸ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಎಲ್ ಎಲ್ ಬಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವವರು ಮೊದಲಿಗೆ kalaburagi.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ Member Secretary, District Legal Services Authority, ADR Building Court Complex, Kalaburagi ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ kalaburagi.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಿ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



















