ಬೆಂಗಳೂರು: ಕೇಂದ್ರ ಸರ್ಕಾರದ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 7,267 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಾಸ್ಟೆಲ್ ವಾರ್ಡನ್, ಪ್ರಿನ್ಸಿಪಾಲ್ ಸೇರಿ ಹಲವು ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ನೇಮಕಾತಿ (EMRS Recruitment 2025) ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 28ರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೂ ಮೊದಲು ಅಕ್ಟೋಬರ್ 23 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಏಕಲವ್ಯ ಮಾದರಿ ವಸತಿ ಶಾಲೆ
ಒಟ್ಟು ಹುದ್ದೆಗಳು: 7,267
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 28
ಉದ್ಯೋಗ ಸ್ಥಳ: ದೇಶಾದ್ಯಂತ
ಒಎಂಆರ್ ಆಧಾರಿತ ಟೆಸ್ಟ್, ಕೌಶಲ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರು ದೇಶಾದ್ಯಂತ ಇರುವ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು nests.tribal.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಪ್ರಿನ್ಸಿಪಾಲ್ 225
ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ಸ್ 1,460
ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ಸ್ 3,962
ಮಹಿಳಾ ಸ್ಟಾಫ್ ನರ್ಸ್ 550
ಹಾಸ್ಟೆಲ್ ವಾರ್ಡನ್ 635
ಅಕೌಂಟಂಟ್ 61
ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟಂಟ್ 228
ಲ್ಯಾಬ್ ಅಟೆಂಡೆಂಟ್ 146
ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಬಿಸಿಎ, ಬಿ.ಕಾಂ, ಬಿಇ, ಬಿಪಿಎಡ್, ಬಿಎಡ್, ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 18 ಸಾವಿರ ರೂಪಾಯಿಯಿಂದ 2.09 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.


















