ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ (KEA Recruitment 2025) ಖಾಲಿ ಇರುವ 44 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 44 ಮ್ಯಾನೇಜರ್ ಹಾಗೂ ಅಸಿಸ್ಟಂಟ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಖಾಲಿ ಇರುವ ಹುದ್ದೆಗಳು: 44
ಹುದ್ದೆಗಳ ಹೆಸರು: ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 1
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ, ಬಿಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 18ರಿಂದ 33 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 83,900 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ದಾಖಲೆಅ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಯಾವ ಹುದ್ದೆ ಎಷ್ಟು ಖಾಲಿ?
ಮ್ಯಾನೇಜರ್- 5
ಅಸಿಸ್ಟಂಟ್ ಮ್ಯಾನೇಜರ್- 7
ಸೀನಿಯರ್ ಅಸಿಸ್ಟಂಟ್- 7
ಜೂನಿಯರ್ ಅಸಿಸ್ಟಂಟ್- 18
ಅಸಿಸ್ಟಂಟ್ ಎಂಜಿನಿಯರ್- 6
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 1
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cetonline.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ನಿಮ್ಮ ಕಾರು, ಬೈಕ್ ಬೇರೆಯವರಿಗೆ ಮಾರಾಟ ಮಾಡ್ತಿದೀರಾ? ಮೊದ್ಲು ಈ ನಿಯಮ ತಿಳಿದುಕೊಳ್ಳಿ



















