ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಗ್ರಂಥಪಾಲಕ ಹುದ್ದೆಗಳ ನೇಮಕಾತಿಗಾಗಿ (RGUHS Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. 44 ಸಹಾಯಕ ಗ್ರಂಥಪಾಲಕ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ :
ನೇಮಕಾತಿ ಸಂಸ್ಥೆ : ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್
ಒಟ್ಟು ಹುದ್ದೆ : 44
ಹುದ್ದೆಗಳ ಹೆಸರು : ಸಹಾಯಕ ಗ್ರಂಥಪಾಲಕ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ : ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 10
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ 18ರಿಂದ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಯಾವ ಹುದ್ದೆ ಎಷ್ಟು ಖಾಲಿ?
ಜೂನಿಯರ್ ಪ್ರೋಗ್ರಾಮರ್- 04
ಅಸಿಸ್ಟಂಟ್ ಎಂಜಿನಿಯರ್ – 01
ಅಸಿಸ್ಟಂಟ್ ಲೈಬ್ರೇರಿಯನ್- 01
ಅಸಿಸ್ಟಂಟ್ – 11
ಜೂನಿಯರ್ ಅಸಿಸ್ಟಂಟ್ – 23
ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು rguhs.ac.in ಗೆ ಭೇಟಿ ನೀಡಬಹುದು.