ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸ್ (RITES Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಟೆಕ್ನಿಕಲ್ ಅಸಿಸ್ಟಂಟ್, ರೆಸಿಡೆಂಟ್ ಎಂಜಿನಿಯರ್ ಸೇರಿ ಒಟ್ಟು 58 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ : ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸ್ (RITES)
ಒಟ್ಟು ಹುದ್ದೆ: 58
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅಧಿಕೃತ ವೆಬ್ಸೈಟ್ : https://rites.com
ಡಿಪ್ಲೋಮಾ ಹಾಗೂ ಎಂಜಿನಿಯರಿಂಗ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ ಎಂದು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.
ನೇಮಕಾತಿ ಹೊಂದಿದ ಮಾಸಿಕ 29,735 ರೂಪಾಯಿಯಿಂದ 32,492 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಜನರಲ್ ಹಾಗೂ ಒಬಿಸಿ ಸಮುದಾಯದವರಿಗೆ 300 ರೂಪಾಯಿ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು https://rites.com ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.