ಬೆಂಗಳೂರು : ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಯ ನೆಪ ಹೇಳಿ ಎಲ್ಲಾ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ತಡೆ ಹಿಡಿದಿದ್ದು, ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ.
ರಾಜ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ಕೂಡಲೇ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಬೃಹತ್ ಶಾಂತಿಯುತ ಪ್ರತಿಭಟನೆಯನ್ನು ಇಂದು(ಸೋಮವಾರ) ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿದೆ.
ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಹಲವು ತಿಂಗಳುಗಳೇ ಕಳೆದರೂ ಫಲಿತಾಂಶವೇ ಪ್ರಕಟಗೊಳಿಸಿಲ್ಲ. ನೇಮಕಾತಿ ಪ್ರಕ್ರಿಯೆ ಹಳ್ಳಹಿಡಿದಿದೆ ಎಂದು ಪ್ರತಿಭಟನಾನಿರತ ಅಭ್ಯರ್ಥಿಗಳು ರಾಜ್ಯ ಸರ್ಕಾರ ಹಾಗೂ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಅತಿಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದ್ದಲ್ಲದೆ, ಸ್ಮರ್ಧಾತ್ಮಕ ಪರೀಕ್ಷೆಗಳು ನಡೆದು ದೀರ್ಘಾವಧಿ ಕಳೆದರೂ ಇನ್ನೂ ನೇಮಕಾತಿ ಭಾಗ್ಯ ದೊರಕಿಲ್ಲ. ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಎಂದು ಒತ್ತಾಯಿಸಿದ್ದಾರೆ.



















