ಬೆಂಗಳೂರು: ಹಾವೇರಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ (DHFWS Haveri Recruitment 2025) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಆರೋಗ್ಯ ಸಂಯೋಜಕರು, ವೈದ್ಯಕೀಯ ಅಧಿಕಾರಿಗಳ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಹುದ್ದೆ ಹೆಸರು: ಜಿಲ್ಲಾ ಆರೋಗ್ಯ ಸಂಯೋಜಕರು, ವೈದ್ಯಕೀಯ ಅಧಿಕಾರಿಗಳು,
ಒಟ್ಟು ಹುದ್ದೆ: 10
ಉದ್ಯೋಗ ಸ್ಥಳ: ಹಾವೇರಿ, ಕರ್ನಾಟಕ
ಅಧಿಕೃತ ವೆಬ್ಸೈಟ್: https://haveri.nic.in/
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 31
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ, ಎಂಎಸ್ಸಿ, ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಎಂಬಿಎ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂಪಾಯಿಯಿಂದ 75 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅಭ್ಯರ್ಥಿಗಳು ಸಲ್ಲಿಸುವ ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್ ಆಗಿರುವ https://haveri.nic.in/ ಗೆ ಭೇಟಿ ನೀಡಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು. ನಂತರ ಅರ್ಜಿ ನಮೂನೆಯ ಲಿಂಕ್ ನಲ್ಲಿ ಎಲ್ಲ ವಿವರ ನಮೂದಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕಕ್ಕಿಂತ ಮೊದಲು ಅರ್ಜಿ ಸಲ್ಲಿಸಬೇಕು.



















