ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (NIMHANS) ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ, ಕ್ಲಿನಿಕಲ್ ಮನಶ್ಶಾಸ್ತ್ರಜ್ಞ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಜುಲೈ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ನಿಮ್ಹಾನ್ಸ್
ಒಟ್ಟು ಹುದ್ದೆಗಳು: 14
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ವಿದ್ಯಾರ್ಹತೆ ಏನು?
ನಿಮ್ಹಾನ್ಸ್ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಎಂ.ಫಿಲ್, ಎಂಎ, ಎಂ.ಎಸ್ಸಿ, ಎಂ.ಫಿಲ್ ಕೋರ್ಸ್ ಗಳನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ಗರಿಷ್ಠ ವಯಸ್ಸು 31-07-2025 ರಂತೆ 35 ವರ್ಷ ಆಗಿರಬೇಕು.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 295 ರೂಪಾಯಿ ಅರ್ಜಿ ಶುಲ್ಕವಿರುತ್ತದೆ. ಜನರಲ್, ಒಬಿಸಿಗಳಿಗೆ 590 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35,400-1,12,400 ರೂ. ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಮೊದಲು https://www.nimhans.ac.in/ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ Registrar, NIMHANS, P.B No.2900, Hosur Road, Bengaluru-560029 ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.