ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಕಂಪನಿಗಳಲ್ಲಿ ಒಂದಾಗಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ಇಎಲ್) ಸಂಸ್ಥೆಯಲ್ಲಿ 43 ಹುದ್ದೆಗಳು ಖಾಲಿ (BHEL Recruitment 2025) ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಜುಲೈ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. https://careers.bhel.in/index.jsp ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬಿಎಚ್ಇಎಲ್
ಕೆಲಸದ ಸ್ಥಳ: ಹರಿದ್ವಾರ, ಉತ್ತರಾಖಂಡ
ಹುದ್ದೆಗಳ ಹೆಸರು: ಟ್ರೇಡ್ ಅಪ್ರೆಂಟಿಸ್
ಅರ್ಜಿ ವಿಧಾನ: ಆನ್ ಲೈನ್
ಯಾವ ಹುದ್ದೆ ಎಷ್ಟು ಖಾಲಿ?
ಫಿಟ್ಟರ್ 70
ಮಶಿನಿಸ್ಟ್ 34
ಟರ್ನರ್ 24
ವೆಲ್ಡರ್ 17
ಎಲೆಕ್ಟ್ರಿಶಿಯನ್ 24
ಡ್ರಾಟ್ಸ್ ಮ್ಯಾನ್ 03
ಫೌಂಡ್ರಿಮ್ಯಾನ್ 04
10ನೇ ತರಗತಿ, ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿಪಡಿಸಿಲ್ಲ. 18ರಿಂದ 25 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.25 ಲಕ್ಷ ರೂಪಾಯಿವರೆಗೆ ಸಂಬಳ ಇರುತ್ತದೆ. ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಿನಾಯಿತಿ ಇದ್ದರೆ, ಒಬಿಸಿಯವರಿಗೆ ಮೂರು ವರ್ಷಗಳ ವಿನಾಯಿತಿ ಇರುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ. ಎಸ್ಸೆಸ್ಸೆಲ್ಸಿ, ಐಟಿಐ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ. bhel.comಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.