ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ (UIIC Recruitment 2026) ಖಾಲಿ ಇರುವ 225 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 225 ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಯುನೈಟೆಡ್ ಇಂಡಿಯಾ ವಿಮಾ ಕಂಪನಿ (UIIC)
ಒಟ್ಟು ಹುದ್ದೆಗಳು: 225
ಹುದ್ದೆಗಳ ಹೆಸರು: ಅಡ್ಮಿನಿಸ್ಟ್ರೇಟಿವ್ ಆಫೀಸರ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 28
ಉದ್ಯೋಗ ಸ್ಥಳ: ದೇಶಾದ್ಯಂತ
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಗ್ರಿ ಮಾಸ್ಟರ್ ಡಿಗ್ರಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 30 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 250 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 1 ಸಾವಿರ ರೂಪಾಯಿ ನಿಗದಿಪಡಿಸಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಡಿಸ್ಕ್ರಿಪ್ಟಿವ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.56 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು uiic.co.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?



















