ಬೆಂಗಳೂರು: ದೇಶದಲ್ಲೇ ಸರ್ಕಾರಿ ವಲಯದ ಬೃಹತ್ ತೈಲ ಹಾಗೂ ನೈಸರ್ಗಿಕ ಅನಿಲ ಉತ್ಪಾದನಾ ಕಂಪನಿಯಾಗಿರುವ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ (ONGC Apprentices Recruitment 2025) ಖಾಲಿ ಇರುವ 2,623 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಈಗಷ್ಟೇ ಕೋರ್ಸ್ ಮುಗಿಸಿದವರಿಗೆ ತರಬೇತಿ ಪಡೆಯಲು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)
ಒಟ್ಟು ಹುದ್ದೆಗಳು: 2,623
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 6
ಉದ್ಯೋಗದ ಸ್ಥಳ: ದೇಶಾದ್ಯಂತ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಬಿ.ಕಾಂ, ಬಿ.ಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಅಲ್ಲಿಸಬಹುದು. ಲೈಬ್ರರಿ ಅಸಿಸ್ಟಂಟ್, ಮೆಕ್ಯಾನಿಕ್ ಆಟೋ ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಆಪರೇಟರ್, ಎಲೆಕ್ಟ್ರಿಶಿಯನ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಕನಿಷ್ಠ 18ರಿಂದ ಗರಿಷ್ಠ 24 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಅವಧಿಯಲ್ಲಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 12,300 ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ongcindia.com. ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ, ಅರ್ಜಿ ಸಲ್ಲಿಸಬೇಕು



















