ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ (RBI Recruitment 2025) ಖಾಲಿ ಇರುವ 28 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್, ಲೀಗಲ್ ಆಫೀಸರ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಒಟ್ಟು ಹುದ್ದೆಗಳ ಸಂಖ್ಯೆ: 28
ಹುದ್ದೆ ಹೆಸರು: ಮ್ಯಾನೇಜರ್, ಲೀಗಲ್ ಆಫೀಸರ್
ಉದ್ಯೋಗ ಸ್ಥಳ: ದೇಶಾದ್ಯಂತ
ಅಧಿಕೃತ ವೆಬ್ಸೈಟ್: https://rbi.org.in/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31
ಪದವಿ, ಸ್ನಾತಕೋತ್ತರ ಪದವಿ, ಬಿ.ಟೆಕ್, ಬಿಇ, ಎಲ್ ಎಲ್ ಬಿ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 21ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 62,500 ರೂಪಾಯಿಯಿಂದ 1.41 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಹಾಗೂ ಆಫ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು https://rbi.org.in/ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.



















