ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಸಂಸ್ಥೆಯಲ್ಲಿ 280 ಹುದ್ದೆಗಳು ಖಾಲಿ (CDAC Recruitment 2025) ಇದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕ, ಡಿಸೈನ್ ಎಂಜಿನಿಯರ್, ಸೀನಿಯರ್ ಡಿಸೈನ್ ಎಂಜಿನಿಯರ್-E2, ಮುಖ್ಯ ತಾಂತ್ರಿಕ ವ್ಯವಸ್ಥಾಪಕ-E6/ಸಲಹೆಗಾರ ಮತ್ತು ಹಿರಿಯ ತಾಂತ್ರಿಕ ವ್ಯವಸ್ಥಾಪಕ-E5 ಸೇರಿ ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ದೇಶಾದ್ಯಂತ ಇರುವ ಸಿಡಿಎಸಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆಯ ಹೆಸರು : ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ( CDAC )
ಒಟ್ಟು ಹುದ್ದೆಗಳ ಸಂಖ್ಯೆ: 280
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆ ಹೆಸರು: ತಾಂತ್ರಿಕ ವ್ಯವಸ್ಥಾಪಕ, ಡಿಸೈನ್ ಎಂಜಿನಿಯರ್
ವಾರ್ಷಿಕ ಸಂಬಳದ ಪ್ಯಾಕೇಜ್: 18,00,000-42,00,000 ರೂಪಾಯಿ
ಬಿ.ಟೆಕ್, ಎಂಜಿನಿಯರಿಂಗ್, ಎಂ.ಟೆಕ್, ಬಿಎಸ್ಸಿ, ಬಿಸಿಎ ಸೇರಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು www.cdac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಲಿಖಿತ ಪರೀಕ್ಷೆ ಬಳಿಕ ಮೆರಿಟ್ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಇದಾದ ನಂತರ ಅಭ್ಯರ್ಥಿಗಳ ಸಂದರ್ಶನ ಮಾಡಲಾಗುತ್ತದೆ. ದಾಖಲೆ ಪರಿಶೀಲನೆಯ ನಂತರ ನೇಮಕಾತಿ ಆದೇಶ ನೀಡಲಾಗುತ್ತದೆ.