ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಈ ಕನಸು ನನಸು ಮಾಡಿಕೊಳ್ಳಲು ಒಳ್ಳೆಯ ಅವಕಾಶವೊಂದು ನಿಮ್ಮ ಮನೆಬಾಗಿಲಿಗೆ ಬಂದಿದೆ. ರೈಲ್ವೆ ನೇಮಕಾತಿ ಮಂಡಳಿಯು (RRB Recruitment 2025) ಬರೋಬ್ಬರಿ 30,307 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 8 ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 29 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ
ಒಟ್ಟು ಹುದ್ದೆ: 30,307
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 29
ಉದ್ಯೋಗ ಸ್ಥಳ: ದೇಶಾದ್ಯಂತ
ಯಾವ ಹುದ್ದೆ ಎಷ್ಟು ಖಾಲಿ?
ಚೀಫ್ ಕಮರ್ಷಿಯಲ್ ಆ್ಯಂಡ್ ಟಿಕೆಟ್ ಸೂಪರ್ ವೈಸರ್- 6,235
ಸ್ಟೇಷನ್ ಮಾಸ್ಟರ್- 5,623
ಗೂಡ್ಸ್ ಟ್ರೇನ್ ಮ್ಯಾನೇಜರ್- 3,562
ಜೂನಿಯರ್ ಅಕೌಂಟ್ ಅಸಿಸ್ಟಂಟ್ ಆ್ಯಂಡ್ ಟೈಪಿಸ್ಟ್- 7,520
ಸೀನಿಯರ್ ಕ್ಲರ್ಕ್ ಆ್ಯಂಡ್ ಟೈಪಿಸ್ಟ್- 7,367
ಅರ್ಜಿ ಸಲ್ಲಿಸುವ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ. ಹಾಗೆಯೇ, ಒಬಿಸಿಯವರಿಗೆ ಮೂರು ವರ್ಷಗಳ ವಿನಾಯಿತಿ ಇದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 29,200 – 35,400 ರೂ. ವೇತನ ನೀಡಲಾಗುತ್ತದೆ. ಅಭ್ಯರ್ಥಿಯು 10-08-2025 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 36 ವರ್ಷ ವಯಸ್ಸಿನವರಾಗಿರಬೇಕು.
ಅರ್ಜಿ ಸಲ್ಲಿಕೆ ಹೇಗೆ?
- ಆರ್ ಆರ್ ಬಿಯ ಅಧಿಕೃತ ವೆಬ್ಸೈಟ್ https://indianrailways.gov.in/ ಗೆ ಭೇಟಿ ನೀಡಿ.
- ನಿಮಗೆ ಸಂಬಂಧಿಸಿದ RRB ವಿಭಾಗ ಆಯ್ಕೆಮಾಡಿ.
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.
- ಎಲ್ಲ ವಿವರಗಳನ್ನು ಭರ್ತಿ ಮಾಡಿ.
- ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಿ.
- ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.



















