ಬೆಂಗಳೂರು: ನೀವು ಈಗಷ್ಟೇ ಎಂಬಿಎ, ಡಿಗ್ರಿ ಕೋರ್ಸ್ ಮುಗಿಸಿದ್ದೀರಾ? ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಎಕ್ಸಿಮ್ ಬ್ಯಾಂಕಿನಲ್ಲಿ ಖಾಲಿ ಇರುವ (Exim Bank Recruitment 2026) 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಎಕ್ಸಿಮ್ ಬ್ಯಾಂಕ್
ಹುದ್ದೆಗಳ ಹೆಸರು: ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 6
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 23
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಎ, ಪದವಿ, ಎಂಎಂಎಸ್, ಪಿಜಿಡಿಬಿಎ, ಪಿಜಿಡಿಬಿಎಂ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎರಡು ಮ್ಯಾನೇಜರ್ ಹಾಗೂ ನಾಲ್ಕು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 93 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ eximbankindia.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ



















