ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘದಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KSRLPS Recruitment 2025) ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದೆ. ಬ್ಲಾಕ್ ಮ್ಯಾನೇಜರ್ ಹಾಗೂ ಕ್ಲಸ್ಟರ್ ಸೂಪರ್ ವೈಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘ (KSRLPS)
ಒಟ್ಟು ಹುದ್ದೆಗಳು: 8
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 22
ಉದ್ಯೋಗ ಸ್ಥಳ: ದಕ್ಷಿಣ ಕನ್ನಡ, ಯಾದಗಿರಿ, ಬಳ್ಳಾರಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ, ಎಂ.ಎಸ್ಸಿ ಕೋರ್ಸ್ ಗಳನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಿದ ಬಳಿಕ, ಅವುಗಳನ್ನು ಪರಿಶೀಲಿಸಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ ksrlps.karnataka.gov.in ಗೆ ಭೇಟಿ ನೀಡಬೇಕು
KSRLPS ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ ವೈರಸರ್ ಹುದ್ದೆಯ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















