ಬೆಂಗಳೂರು: ಯಾದಗಿರಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ (DHFWS recruitment 2025) ಖಾಲಿ ಇರುವ 26 ವೈದ್ಯ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 26 ಡಾಕ್ಟರ್ ಹುದ್ದೆಗಳು ಖಾಲಿ ಇದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಡಾಕ್ಟರ್
ಒಟ್ಟು ಹುದ್ದೆಗಳ ಸಂಖ್ಯೆ: 26
ಉದ್ಯೋಗ ಸ್ಥಳ: ಯಾದಗಿರಿ
ವೆಬ್ ಸೈಟ್ ಲಿಂಕ್: https://yadgir.nic.in/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 19
ಡಿಪ್ಲೋಮಾ, ಬಿಎಸ್ಸಿ, ಎಂಬಿಬಿಎಸ್, ಸ್ನಾತಕೋತ್ತರ ಪದವಿ ಅಧ್ಯಯನ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ. ಎಂಡಿ, ಡಿಎಂ, ಎಂ.ಎಸ್ಸಿಓದಿದವರಿಗೂ ಅವಕಾಶವಿದೆ. ಗರಿಷ್ಠ 50 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 12,679-1,30,000 ರೂಪಾಯಿ ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ https://yadgir.nic.in/ ಗೆ ಭೇಟಿ ನೀಡಬೇಕು.
- DHFWS Yadgir ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
- ಡಾಕ್ಟರ್ ಹುದ್ದೆಯ ಅಧಿಸೂಚನೆ ಓದಬೇಕು
- ಆನ್ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
- ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
- ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















