ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಉದ್ಯೋಗಾವಕಾಶ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶ ಲಭಿಸಿದೆ. ಬೆಂಗಳೂರಿನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸಂಸ್ಥೆಯಲ್ಲಿ ಖಾಲಿ ಇರುವ ಗ್ರಂಥಪಾಲಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್
ಹುದ್ದೆ ಹೆಸರು: ಗ್ರಂಥಪಾಲಕ
ಉದ್ಯೋಗ ಸ್ಥಳ: ಬೆಂಗಳೂರು
ಅಧಿಕೃತ ವೆಬ್ ಸೈಟ್: https://www.iimb.ac.in/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 14
ಪದವಿ, ಸ್ನಾತಕೋತ್ತರ ಪದವಿ, ಪಿಎಚ್.ಡಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವೇತನ, ವಯೋಮಿತಿ ಸಡಿಲಿಕೆ ಸೇರಿ ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಐಐಎಂ ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃ ವೆಬ್ ಸೈಟ್ ಆಗಿರುವ https://www.iimb.ac.in/ ಗೆ ಭೇಟಿ ನೀಡಬೇಕು
ಅಲ್ಲಿ ಐಐಎಂಬಿ ಗ್ರಂಥಪಾಲಕ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆ ಓದಿಕೊಂಡು, ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ಸಲ್ಲಿಕೆ ಪ್ರತಿ ಡೌನ್ ಲೌಡ್ ಮಾಡಿಟ್ಟುಕೊಳ್ಳಬೇಕು



















