ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘ (KSRLPS Recruitment 2025)ದಲ್ಲಿ ಖಾಲಿ ಇರುವ 09 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜರ್ ಹಾಗೂ ಕ್ಲಸ್ಟರ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘ (KSRLPS)
ಒಟ್ಟು ಹುದ್ದೆಗಳು: 09
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31
ಉದ್ಯೋಗದ ಸ್ಥಳ: ಗದಗ
ಕರ್ನಾಟಕದ ಗದಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಬಿಎಸ್ಸಿ, ಎಂಎಸ್ಸಿ, ಎಂಬಿಎ, ಎಂಎಸ್ ಡಬ್ಲ್ಯೂ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷದೊಳಗಿನವರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಡಿಸ್ಟ್ರಿಕ್ಟ್ ಪ್ರೋಗ್ರಾಂ ಮ್ಯಾನೇಜರ್, ತಾಲೂಕು ಪ್ರೋಗ್ರಾಂ ಮ್ಯಾನೇಜರ್, ಕ್ಲಸ್ಟರ್ ಸೂಪರ್ ವೈಸರ್, ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ksrlps.karnataka.gov.inಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ, ಅರ್ಜಿ ಸಲ್ಲಿಸಬೇಕು