ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಪ್ರಮುಖ ತೈಲ ಕಂಪನಿಯಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ಸಲ್ಟಂಟ್ ಅಥವಾ ಸಮಾಲೋಚಕರ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಗಸ್ಟ್ 9 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಬಿಎಸ್ಸಿ, ಬಿಇ, ಬಿ.ಟೆಕ್, ಎಂಎ, ಎಂಬಿಎ, ಎಂಸಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 35-38 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮೆರಿಟ್ ಲಿಸ್ಟ್, ಅನುಭವ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಒಬಿಸಿ ಸಮುದಾಯದ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ಐದು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.07 ಲಕ್ಷ ರೂಪಾಯಿಯಿಂದ 1.62 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ bharatpetroleum.in ವೆಬ್ ಸೈಟ್ ಗೆ ಭೇಟಿ ನೀಡಬೇಕು
BPCL Consultant Apply Online ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು
ಆನ್ ಲೈನ್ ನಲ್ಲೇ ಅರ್ಜಿಯನ್ನು ಭರ್ತಿ ಮಾಡಬೇಕು
ನಿಮ್ಮ ಕೆಟಗರಿ ಅನ್ವಯ ಫೀಸ್ ಕಟ್ಟಬೇಕು
ಸಬ್ ಮಿಟ್ ಬಟನ್ ಪ್ರೆಸ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ಬಳಕೆಗಾಗಿ ಅಪ್ಲಿಕೇಶನ್ ನಂಬರ್ ಬರೆದಿಟ್ಟುಕೊಳ್ಳಬೇಕು



















