ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ (Rail Coach Factory Recruitment 2025) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಸೂಪರಿಂಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪಂಜಾಬಿನ ಕಪುರ್ತಲಾದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
“ಹುದ್ದೆಗಳ ವಿವರ ಹೀಗಿದೆ.”
- ನೇಮಕಾತಿ ಸಂಸ್ಥೆ: ರೈಲ್ ಕೋಚ್ ಫ್ಯಾಕ್ಟರಿ
- ಹುದ್ದೆಗಳ ಹೆಸರು: ಸೂಪರಿಂಟೆಂಡೆಂಟ್
- ಒಟ್ಟು ಹುದ್ದೆಗಳು: 02
- ಉದ್ಯೋಗ ಸ್ಥಳ: ಕಪುರ್ತಲಾ, ಪಂಜಾಬ್
- ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
- ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 27
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಲ್ಲಿ ಡಿಪ್ಲೋಮಾ, ಬಿಎಸ್ಸಿ, ಡಿಎಂಎಲ್‌ಟಿ ಕೋರ್ಸ್‌ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕಂಪ್ಯೂಟರ್ ಬೇಸ್ಡ್ ಟೆಸ್ಟ್, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ rcf.indianrailways.gov.in ವೆಬ್‌ಸೈಟಗಗಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
“ಅರ್ಜಿ ಸಲ್ಲಿಸಬೇಕಾದ ವಿಳಾಸ”
Assistant Personnel Officer-II, RCF, Kapurthala