ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಲ್ಲಿ ಖಾಲಿ ಇರುವ ಒಂದು ಸೈಂಟಿಫಿಕ್ ಕನ್ಸಲ್ಟಂಟ್ ಗ್ರೇಡ್- I ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (MoEFCC Recruitment 2026) ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ
ಖಾಲಿ ಇರುವ ಹುದ್ದೆಗಳು: 1
ಹುದ್ದೆಗಳ ಹೆಸರು: ಸೈಂಟಿಫಿಕ್ ಕನ್ಸಲ್ಟಂಟ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಉದ್ಯೋಗ ಸ್ಥಳ: ನವದೆಹಲಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 12
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 90 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ- ಸಹಾಯಕ ನಿರ್ದೇಶಕರು (ಕುಮಾರಿ ಸ್ವಾತಿ ಸೇನನ್), ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, 3ನೇ ಮಹಡಿ, ವಾಯು ವಿಭಾಗ, ಜೋರ್ ಬಾಗ್ ರಸ್ತೆ, ನವದೆಹಲಿ – 110003. ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು swathi.senan@gov.in ಗೂ ಮೇಲ್ ಮಾಡಬಹುದು. ಹೆಚ್ಚಿನ ಮಾಹಿತಿಗೆ moef.gov.in ಗೆ ಭೇಟಿ ನೀಡಿ.
ಇದನ್ನೂ ಓದಿ : CSK ವಿರುದ್ಧದ ಬಿಗ್ ಫೈಟ್ ಮುನ್ನ ಮುಂಬೈ ಇಂಡಿಯನ್ಸ್ ಸೇರಿಕೊಂಡ ಸ್ಟಾರ್ ಆಲ್‌ರೌಂಡರ್!



















