ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (ADPM) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹೊರ ಗುತ್ತಿಗೆ ಆಧಾರದ ಮೇಲೆ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಾಗಿ ನೇರ ನೇಮಕಾತಿ ನಡೆಯುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಹುದ್ದೆಯನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮೈಸೂರು ಜಿಲ್ಲಾ ಪಂಚಾಯಿತಿ
ಒಟ್ಟು ಹುದ್ದೆ: 01
ಹುದ್ದೆ ಹೆಸರು: ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ನೇಮಕಾತಿ ವಿಧಾನ: ನೇರ ನೇಮಕಾತಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 12
ಜುಲೈ 31ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಗಸ್ಟ್ 12ರೊಳಗೆ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೈಸೂರು ಜಿಲ್ಲಾ ಪಂಚಾಯಿತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಸಿಎ, ಬಿ.ಇ, ಬಿ.ಟೆಕ್ ಅಥವಾ ಎಂಸಿಎ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮೊದಲಿಗೆ ಅಭ್ಯರ್ಥಿಗಳು mysore.nic.in ವೆಬ್ ಸೈಟ್ ಗೆ ತೆರಳಿ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಿದ ಬಳಿಕ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ದಿನಾಂಕ ನಿಗದಿಪಡಿಸಲಾಗುತ್ತದೆ. ಸಂದರ್ಶನದ ಬಳಿಕ ನೇಮಕಾತಿ ಆದೇಶ ನೀಡಲಾಗುತ್ತದೆ.