ಬೆಂಗಳೂರು: ಕಲಬುರಗಿ ಜಿಲ್ಲೆಆಳಂದ ತಾಲೂಕು ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 7 ಬೋಧಕ ಸಿಬ್ಬಂದಿಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಏಳು ಇಂಗ್ಲಿಷ್ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವಾಕ್ ಇನ್ ಸಂದರ್ಶನದ ಮೂಲಕ ನೇಮಕಾತಿ ನಡೆಯುತ್ತಿದೆ. ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ವಿಶ್ವವಿದ್ಯಾಲಯ
ಉದ್ಯೋಗ ಸ್ಥಳ: ಕಲಬುರಗಿ
ಒಟ್ಟು ಹುದ್ದೆ: 07
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸ್ನಾತಕೋತ್ತರ ಪದವಿ ಜತೆಗೆ ಯುಸಿಜಿ/ಸಿ ಎಸ್ ಐ ಆರ್, ನೆಟ್ ತೇರ್ಗಡೆ ಹೊಂದಿದ್ದಲ್ಲಿ 40 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ನೆಟ್ ಜತೆಗೆ ಪಿಎಚ್.ಡಿ ಪದವಿ ಹೊಂದಿದ್ದಲ್ಲಿ 45 ಸಾವಿರ ರೂಪಾಯಿ ಮಾಸಿಕ ವೇತನ ನೀಡಲಾಗುವುದು ಎಂದು ವಿವಿ ತಿಳಿಸಿದೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಶೈಕ್ಷಣಿಕ ಪ್ರಮಾಣ ಪತ್ರಗಳು ಸೇರಿ ಇತರೆ ಅಗತ್ಯ ಮಾಹಿತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಆಗಸ್ಟ್ 11ರಂದು ಬೆಳಗ್ಗೆ 11ಕ್ಕೆ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶನ ನಡೆಯಲಿದೆ. hodenglish@cuk.ca.in ಗೆ ಭೇಟಿ ನಿಡಿ ತಮ್ಮ ರೆಸ್ಯೂಮ್ ಅನ್ನು ಇಮೇಲ್ ಮೂಲಕವೂ ಕಳುಹಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಅಗತ್ಯ ಮಾಹಿತಿಗೆ cuk.ac.in ಇಲ್ಲಿಗೆ ಭೇಟಿ ನೀಡಬಹುದು ಎಂದು ತಿಳಿಸಲಾಗಿದೆ.