ಬೆಂಗಳೂರು: ರಾಜ್ಯಕ್ಕೆ ಇನ್ನೂ ಮುಂಗಾರು ಮಳೆ ಪ್ರವೇಶಿಸಿಲ್ಲ. ಆದರೂ ಹಲೆವೆಡೆ ವ್ಯಾಪಕ ಮಳೆಯಾಗುತ್ತಿದೆ. ಈಗ ಕರಾವಳಿಯಲ್ಲಿ ಮೇ 25ರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಮೇ 25ರಿಂದ ಮಳೆ(Rain) ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ ಅಂತ್ಯದ ವೇಳೆಗೆ ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭವಾಗುವ ಸಾಧ್ಯತೆ ಇದೆ. ಶುಕ್ರವಾರ ಕೂಡ ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಕೂಡ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ,ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಮೇ 25ರ ನಂತರ ಈ ಪ್ರದೇಶಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



















