ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 24ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿಲಾಗಿದೆ. ಅಲ್ಲದೇ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರದೊಳಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜುಲೈ 25ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 26ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 27ರಂದು ಕೂಡ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


















