ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಸಂಸದ್ ಖೇಲ್ ಮಹೋತ್ಸವ-2025ರ ನೋಂದಣಿ ಪ್ರಕ್ರಿಯೆಗೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.
ಈ ಕುರಿತು ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ದೇಶದ ಕ್ರೀಡಾ ಕ್ಷೇತ್ರವನ್ನು ಮತ್ತೊಂದು ಮಹತ್ವದ ಘಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ “ಸಂಸದ್ ಖೇಲ್ ಮಹೋತ್ಸವ್-2025” ನ್ನು ಕೇಂದ್ರ ಸರ್ಕಾರಿ ಜಾರಿಗೆ ತಂದಿದೆ.

ದೇಶದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ ಇನ್ನೂ ಅನೇಕ ಕ್ರೀಡಾ ಪಟುಗಳನ್ನು ಮತ್ತು ಕ್ರೀಡಾ ಆಸಕ್ತರನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ಈ ಮೂಲಕ ಹೊಸ ಪ್ರತಿಭೆಗಳು ಅರಳಿ ನಿಂತು, ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು.
ಈ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷರಾದ ಅನಿತಾ ಆರ್.ಕೆ ಸೇರಿದಂತೆ ಹಲವರು ಇದ್ದರು.