ಬೆಂಗಳೂರು : ದೇಶದ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡುವ ಉದ್ದೇಶದಿಂದ ರಿಲಯನ್ಸ್ ಫೌಂಡೇಶನ್ 2026-27ನೇ ಸಾಲಿನ ವಿದ್ಯಾರ್ಥಿವೇತನಕ್ಕೆ (Reliance Foundation Scholarship 2026-27) ಅರ್ಜಿಗಳನ್ನು ಆಹ್ವಾನಿಸಿದೆ. ಪದವಿ (UG) ಮತ್ತು ಸ್ನಾತಕೋತ್ತರ (PG) ಹಂತದ ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿವೇತನದ ಮೊತ್ತ:
ಪದವಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಟ್ಟು 2 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ಸಿಗಲಿದೆ. ಒಟ್ಟು 5,000 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಟ್ಟು 6 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಸುಮಾರು 100 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಹತೆಗಳು:
ಅರ್ಜಿದಾರರು ಭಾರತೀಯ ನಾಗರಿಕರಾಗಿರಬೇಕು. ಪದವಿ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು ಮತ್ತು ಪ್ರಸಕ್ತ ಸಾಲಿನಲ್ಲಿ (2026-27) ಯಾವುದೇ ಪದವಿ ಕೋರ್ಸಿನ ಮೊದಲ ವರ್ಷದಲ್ಲಿ ಪೂರ್ಣಕಾಲಿಕವಾಗಿ ದಾಖಲಾಗಿರಬೇಕು. ವಾರ್ಷಿಕ ಕೌಟುಂಬಿಕ ಆದಾಯ 15 ಲಕ್ಷ ರೂಪಾಯಿ ಇರಬೇಕು (2.5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಇರುವವರಿಗೆ ಆದ್ಯತೆ ನೀಡಲಾಗುತ್ತದೆ). ಅಭ್ಯರ್ಥಿಗಳು ಕಡ್ಡಾಯವಾಗಿ ಆನ್ ಲೈನ್ ಆಪ್ಟಿಟ್ಯೂಡ್ ಟೆಸ್ಟ್ (Aptitude Test) ಬರೆಯಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ವಿದ್ಯಾರ್ಥಿಗಳು ರಿಲಯನ್ಸ್ ಫೌಂಡೇಶನ್ ನ ಅಧಿಕೃತ ವೆಬ್ಸೈಟ್ scholarships.reliancefoundation.org ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಅರ್ಜಿಯನ್ನು ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನವಾಗಿದೆ. ಆರ್ಥಿಕ ಅಡಚಣೆಯಿಲ್ಲದೆ ಉನ್ನತ ಶಿಕ್ಷಣ ಮುಂದುವರಿಸಲು ಬಯಸುವ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಫೌಂಡೇಶನ್ ನ ವೆಬ್ ಸೈಟ್ ಪರಿಶೀಲಿಸಿ
ಇದನ್ನೂ ಓದಿ : ‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು



















