Reliance Foundation Scholarship for 5,100 UG and PG students: how to apply?
ಬೆಂಗಳೂರು: ದೇಶದಲ್ಲೇ ನಂಬರ್ 1 ಕಂಪನಿ ಎನಿಸಿರುವ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಯು ಸಾಮಾಜಿಕ ಸೇವಾ ಕಾರ್ಯಕ್ರಮಗಳ ಮೂಲಕವೂ ಜನರ ಗಮನ ಸೆಳೆದಿದೆ. ಈಗ ರಿಲಯನ್ಸ್ ಫೌಂಡೇಷನ್ ವತಿಯಿಂದ 5,100 ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ (Reliance Foundation Scholarship) ನೀಡುವುದಾಗಿ ಘೋಷಣೆ ಮಾಡಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಸ್ಕಾಲರ್ ಶಿಪ್ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಪ್ರಥಮ ವರ್ಷದ ಪದವಿ ಹಾಗೂ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಭಾರತದ ನಾಗರಿಕರಾಗಿರಬೇಕು ಮತ್ತು ಭಾರತದಲ್ಲಿಯೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರಬೇಕು ಎಂದು ಸಂಸ್ಥೆ ತಿಳಿಸಿದೆ. ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಸ್ನಾತಕೋತ್ತರ ವಿದ್ಯಾರ್ಥಿಗಳು ಅಂದರೆ, ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನದಂತಹ ಆಯ್ದ ಕ್ಷೇತ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 6 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ವಿದ್ಯಾರ್ಥಿಗಳ ಆಯ್ಕೆಯನ್ನು ಅವರ ಶೈಕ್ಷಣಿಕ ಸಾಧನೆ, ಪ್ರಮಾಣಪತ್ರಗಳು ಮತ್ತು ಕುಟುಂಬದ ಆರ್ಥಿಕ ಹಿನ್ನೆಲೆ ಆಧಾರದಲ್ಲಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನಾಂಕವಾಗಿದೆ. ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು scholarships.reliancefoundation.org ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.