ಬೆಂಗಳೂರು : ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಅಡಕಮಾರನಹಳ್ಳಿಯ ಹನುಮಾನ್ ದೇವಸ್ಥಾನದ ಹಿಂಭಾಗದಲ್ಲಿರುವ ರಿಲಯನ್ಸ್ ವೇರ್ಹೌಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಅನಾಹುತ ಉಂಟಾಗಿದೆ.
ಬುಧವಾರ ರಾತ್ರಿ ಸುಮಾರು 10:30ರ ವೇಳೆಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಜ್ವಾಲೆಗಳು ಮುಗಿಲೆತ್ತರಕ್ಕೆ ಚಿಮ್ಮಿ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೀಣ್ಯ ಹಾಗೂ ನೆಲಮಂಗಲದಿಂದ ಆಗಮಿಸಿದ ಒಟ್ಟು 6 ಅಗ್ನಿಶಾಮಕ ವಾಹನಗಳ ನೆರವಿನಿಂದ ಬೆಂಕಿ ನಂದಿಸಲು ಹರಸಾಹಸಪಟ್ಟರು.
ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲವೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ನಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ನಿಖರ ಕಾರಣಕ್ಕಾಗಿ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಬೈಕ್ಗಳಿಗೆ ಏಕಾಏಕಿ ಹೊತ್ತಿಕೊಂಡ ಬೆಂಕಿ


















