ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ 76 ವರ್ಷದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಇನ್ನು ಕೇವಲ ನೆನಪು ಮಾತ್ರ.
ಬ್ಯಾಂಕ್ ಜನಾರ್ದನ್ 1948 ರಲ್ಲಿ ಹೊಳಲ್ಕೆರೆಯಲ್ಲಿ ಜನಿಸಿದ್ದು, ಅಲ್ಲಿಯೇ ಬಾಲ್ಯದ ವಿದ್ಯಾಭ್ಯಾಸ ಮುಗಿಸಿದ್ದರು. ಬಳಿಕ ನಾಟಕಗಳಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಅವರು, ಬ್ಯಾಂಕ್ ಒಂದರಲ್ಲಿ ನೌಕರಿ ಮಾಡುತ್ತಿದ್ರು. ಬ್ಯಾಂಕ್ನಲ್ಲಿ ನೌಕರಿ ಮಾಡುತ್ತಿದ್ದ ಕಾರಣಕ್ಕೆ ಜನಾರ್ದನ್ ಅವರ ಹೆಸರು ಬ್ಯಾಂಕ್ ಜನಾರ್ದನ್ ಎಂದಾಗಿದ್ದು, 800ಕ್ಕೂ ಅಧಿಕ ಚಿತ್ರಗಳಲ್ಲಿ ಎಲ್ಲಾ ರೀತಿಯ ಪಾತ್ರಗಳಲ್ಲಿ ಮಿಂಚಿದ್ದಾರೆ.
3 ಬಾರಿ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಾಘಾತವಾಗಿತ್ತು. ಇತ್ತೀಚೆಗೆ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ 2:30 ರ ಸುಮಾರಿಗೆ ಕೊನೆಯುಸಿರೆಳೆದರು.