ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಜಾಮೀನಿಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ದರ್ಶನ್ ತೂಗುದೀಪ ಸೇರಿದಂತೆ ಎಲ್ಲ ಆರೋಪಿಗಳು ಜಾಮೀನು ಅರ್ಜಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲವೂ ಕಾನೂನು ಪ್ರಕಾರವೇ ತೀರ್ಮಾನವಾಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 17 ಜನ ಆರೋಪಿಗಳು ಜಾಮೀನು ಪಡೆಯಲು ಮುಂದಾಗಿದ್ದಾರೆ. ಕೋರ್ಟ್ ನಲ್ಲಿ ಏನು ತೀರ್ಮಾನ ಆಗುತ್ತದೋ ಎಂಬುವುದನ್ನು ಕಾದು ನೋಡಬೇಕಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಎಲ್ಲಾ 17 ಆರೋಪಿಗಳಿಗೆ ಸೋಮವಾರ ಆರೋಪಪಟ್ಟಿ ಕೈ ಸೇರಲಿದೆ. ಆನಂತರ ಅವರು ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
ಈ ವೇಳೆ ಮುಂದೊಮ್ಮೆ ನಾನು ಸಿಎಂ ಆಗ್ತೇನೆ ಎಂಬ ಎಂ.ಬಿ. ಪಾಟೀಲ್ ಹೇಳಿಕೆಯ ವಿಷಯವಾಗಿ ಮಾತನಾಡಿದ ಅವರು, ಇವತ್ತಿಗೆ ಆ ಪ್ರಶ್ನೆ ಬರಲ್ಲ, ಸಿಎಂ ಇದ್ದಾರೆ. ಕೋರ್ಟ್ ನಲ್ಲಿ ಕೇಸ್ ಇರುವುದು ನಿಜ. ತೀರ್ಪಿನ ನಂತರ ಎಲ್ಲವೂ ಗೊತ್ತಾಗಲಿದೆ. ಸಿಎಂ ಹುದ್ದೆಗಾಗಿ ಈಗಾಗಲೇ ಚರ್ಚೆ ಮಾಡುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ.